Translated by Omshivaprakash H L and Mukund Gowda ಇಪ್ಪತ್ತಾರು ವರ್ಷಗಳ ಹಿಂದೆ, 1993 ರ ಜೂನ್ 1 ರಂದು ನಗರ ಆಡಳಿತದಲ್ಲಿ “ಜನರಿಗೆ ಅಧಿಕಾರ” ನೀಡಲು 74 ನೇ ಸಾಂವಿಧಾನಿಕ ತಿದ್ದುಪಡಿ ಅಥವಾ ನಾಗರಪಾಲಿಕಾ ಕಾಯ್ದೆಯನ್ನು ಜಾರಿಗೆ ತರಲಾಯಿತು. 74 ನೇ ಸಿಎ ಅಡಿಯಲ್ಲಿ, ವಿಕೇಂದ್ರೀಕರಣಕ್ಕೆ ಮಹತ್ವ ನೀಡಿ, ನಾಗರಿಕರ ಭಾಗವಹಿಸುವಿಕೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಸಲು ಮೂರು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಎಲ್ಲಾ ಪುರಸಭೆ ಸಂಸ್ಥೆಗಳಲ್ಲಿ ವಾರ್ಡ್ ಸಮಿತಿಗಳನ್ನು ರಚಿಸಬೇಕಾಗಿತ್ತು. ವಾರ್ಡ್ ಸಮಿತಿಯ ಸದಸ್ಯರು ವಾರ್ಡ್‌ನಲ್ಲಿ ಕೈಗೊಂಡ ಕೆಲಸಗಳನ್ನು ವಿಶ್ಲೇಷಿಸುವುದು, ಅಭಿವೃದ್ಧಿ ಯೋಜನೆಯನ್ನು ರಚಿಸುವುದು, ವಿವಿಧ ಕಾಮಗಾರಿಗಳಿಗೆ ಬಜೆಟ್ ಹಂಚಿಕೆಯನ್ನು ನಿರ್ಧರಿಸುವುದು ಇತ್ಯಾದಿಗಳನ್ನು ಮಾಡಬೇಕಾಗಿರುತ್ತದೆ. ಆದರೆ ಅನೇಕ ವಾರ್ಡ್‌ಗಳಲ್ಲಿ, ಸಭೆಗಳು ಅನಿರ್ಧಿಷ್ಟವಾಗಿದೆ, ಸಮಿತಿಯ ಸದಸ್ಯರಿಗೆ ಮಾತಿಗೆ ಯಾವುದೇ ಅವಕಾಶ ನೀಡದೇ, ಕೌನ್ಸಿಲರ್‌ಗಳು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಇನ್ನು ಹಲವು ವಾರ್ಡ್‌ಗಳಲ್ಲಿ, ಸಭೆಗಳು ಕೇವಲ ಕುಂದುಕೊರತೆ ಹೇಳಿಕೊಳ್ಳುವ ವೇದಿಕೆಗಳಾಗಿ ಮಾರ್ಪಟ್ಟಿವೆ. ಅದಾಗ್ಯೂ ಈ ಕುಂದುಕೊರತೆಗಳನ್ನು ನೋಂದಾಯಿಸುವುದಿಲ್ಲ ಅಥವಾ ಪರಿಹರಿಸಲಾಗಿಲ್ಲ.…
Read moreWe’re at 27 out of 100 donors. Will you be the next to contribute to our civic engagement work?