ನಿಮ್ಮೂರಿಗೆ ಈ ಹೆಸರು ಯಾಕೆ ಬಂತಂತೆ ಅಂತ ಪ್ರಪಂಚದ ಯಾರನ್ನೇ ಕೇಳಿ... ಒಂದು ಸೊಗಸಾದ ಕತೆ ಹೇಳ್ತಾರೆ. ರೋಚಕ ಘಟನೆ ಹೇಳ್ತಾರೆ. ಆದ್ರೆ ನಮ್ಮೂರಿಗೆ ಮಾತ್ರ ಆ ಭಾಗ್ಯವಿಲ್ಲ. ಅದೆಂತದೋ ಕಾಳು ಬೇಯ್ಸಿರೋ ಅಜ್ಜಿಯ ಕತೆನ ಬೆಂಗಳೂರನ್ನೋ ಬಿನ್ನಾಣಗಿತ್ತಿಗೆ ತಗಲ್ಹಾಕಿದಾರೆ. ನಿಜ ಹೇಳ್ತೀನಿ... ಬೆಡಗು ಅನ್ನೋ ಶಬ್ದದಿಂದಲೇ ನಮ್ಮೂರಿಗೆ ಬೆಂಗಳೂರು ಅನ್ನೋ ಹೆಸರು ಬಂದಿದೆ. ಬೆಡಗಿನೂರು - ಬೆಂಗಳೂರು… ಇಲ್ಲಿ ಹುಟ್ಟೋಕೆ ಜನ್ಮಾಂತರದ ಪುಣ್ಯಫಲವಿರಬೇಕು.ಅಲ್ಪ-ಸ್ವಲ್ಪ ಪುಣ್ಯ ಮಾಡಿದ್ರೆ ಕೊನೇಪಕ್ಷ ಇಲ್ಲಿನ ನಾಗರಿಕನಾಗಬಹುದು. ಇನ್ನು ಈ ಭಾಗ್ಯದೂರಿನ ನಗರಪಾಲಕ ಅಥವಾ ಮೇಯರ್ ಆಗಲಿಕ್ಕೆ ಪುಣ್ಯ ಮಾತ್ರ ಸಾಲದು.. ಯೋಗ್ಯತೆ, ಅರ್ಹತೆ, ದೂರದೃಷ್ಟಿ, ನಿಸ್ವಾರ್ಥತೆ, ನಾಗರಿಕಪ್ರಜ್ಞೆ ಎಲ್ಲವೂ ಇರಲೇಬೇಕು. ಈ ಎಲ್ಲ ಗುಣಗಳೂ ನನ್ನಲ್ಲೇ ಇವೆಯಲ್ಲ.. ನಾನ್ಯಾಕೆ ಒಂದು ಕೈ ನೋಡ್ಬಾರ್ದು ಅನ್ನೋದು ನನ್ನ ಲೆಕ್ಕಾಚಾರ. ಬೆಂಗಳೂರು ಅಂದ್ರೆ ಅವಕಾಶಗಳ ನಗರ. ಜೀವನ ಕಟ್ಟಿಕೊಂಡು ನೆಮ್ಮದಿಯಾಗಿ ಬಾಳಬೇಕು ಅನ್ನುವ ಸ್ವಾಭಿಮಾನಿಗಳಿಗೆ ಹೇಳಿ ಮಾಡಿಸಿದ ಜಾಗವಿದು. ಆದ್ರೆ ಈ ಸ್ವಾಭಿಮಾನಿಗಳು ಸೃಷ್ಟಿಸುವ ಕಸ ನಮ್ಮ ನಗರದ…
Read more