ಸುಧಾ ವಿ ಉತ್ತರಹಳ್ಳಿಯಲ್ಲಿ ಹೂವಿನ ವ್ಯಾಪಾರಿಯಾಗಿದ್ದು, ಇತ್ತೀಚೆಗಷ್ಟೆ ವ್ಯಾಪಾರಕ್ಕೆ ಪ್ರವೇಶ ಪಡೆದಿದ್ದಾರೆ. ಚಿತ್ರ: ಪ್ರಗತಿ ರವಿ Translated by Madhusudhan Rao ಸುಧಾ ವಿ, ತನ್ನ ಹೂವಿನ ಗಾಡಿಗೆ ತುಂಬಾ ಹತ್ತಿರದಲ್ಲಿ ಓಡಾಡುವ ಹಸುಗಳನ್ನು ಓಡಿಸುತ್ತಾ, ಉತ್ತರಹಳ್ಳಿಯ ಪ್ರಮುಖ ರಸ್ತೆಯೊಂದರಲ್ಲಿ ಬೀದಿವ್ಯಾಪಾರ ಮಾಡುತ್ತಾರೆ. ಮಕರ ಸಂಕ್ರಾಂತಿಯ ದಿನದಂದು ಗ್ರಾಹಕರ ಹೆಚ್ಚಳ ಇದ್ದರೆ, ಮರುದಿನ ಕಥೆಯೇ ಬೇರೆಯಾಗಿತ್ತು. ಹಿಂದಿನ ದಿನ ತಾಜಾತನ ತುಂಬಿದ್ದ ಕೆಂಪು ಗುಲಾಬಿಗಳನ್ನು ಕೇಳುವವರೇ ಇರಲಿಲ್ಲ. ಸಾಲದ್ದಕ್ಕೆ, ಅದೇ ರಸ್ತೆಯ ಬಳಿ ಮಾರಾಟ ಮಾಡುವ ಇತರ ಮೂರು ಹೂಗಾಡಿಗಳ ಜೊತೆ ತೀವ್ರ ಪೈಪೋಟಿ ಎದುರಿಸುತ್ತಾರೆ. ಕೋವಿಡ್ ಪಿಡುಗಿನಿಂದ ಉದ್ಯೋಗಗಳು ನಷ್ಟವಾದಾಗ, ಅನೇಕರು ಅನೌಪಚಾರಿಕ ವಲಯಕ್ಕೆ ತೆರಳಿದ್ದು, ಅದರಲ್ಲಿ ದುಡಿಮೆ ಹೆಚ್ಚು, ಅದು ಮೂಲ ಸಂಪನ್ಮೂಲಗಳ ಮೇಲೆ ಅವಲಂಬಿತ ಮತ್ತು ಪ್ರವೇಶಿಸುವುದು ಸುಲಭ ಅನ್ನುವ ಕಾರಣಕ್ಕೆ. ರಸ್ತೆ ವ್ಯಾಪಾರ, ವಿಶೇಷವಾಗಿ, ನಗರದಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ. ಮನೆ ಕೆಲಸ ಮಾಡುತ್ತಿದ್ದ ಸುಧಾ, ಲಾಕ್‌ಡೌನ್ ನಿಂದ ತಾನು ಕೆಲಸ ಮಾಡುತ್ತಿದ್ದ ಅರ್ಧಕ್ಕಿಂತ ಹೆಚ್ಚು ಮನೆಗಳ…
Read moreWe need 2 min of your time!
Tell us what matters to you—and help make our stories, data, workshops, and civic resources more useful for you and your city—in this short survey.